ಚಿಕ್ಕೋಡಿ: ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿಯ ಹುಕ್ಕೇರಿಯಲ್ಲಿ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ಕೇಸ್ತಿ (27) ಎಂದು ಗುರುತಿಸಲಾಗಿದೆ. ಯುವಕ ನಗರದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಎನ್ನಲಾಗಿದ್ದು, ಅತಿಯಾದ ಸಾಲ ಹಾಗೂ ಮದುವೆಗೆ ಹೆಣ್ಣು ಸಿಗದೆ ನೊಂದಿದ್ದ ಎನ್ನಲಾಗಿದೆ.
ಇದೇ ಕಾರಣಕ್ಕೆ ಗ್ಯಾರೇಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


