ಮಾನವನ ಕೈಯನ್ನು ಕಚ್ಚಿಕೊಂಡು ಹೋಗುತ್ತಿದ್ದ ನಾಯಿಯನ್ನು ಕಂಡು ಸಾರ್ವಜನಿಕರು ಬೆಚ್ಚಿಬಿದ್ದ ಘಟನೆ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಅಲ್ಲಿನ ಶತಾಬ್ಧಿ ಹಂತ 3 ಆವರಣದಲ್ಲಿ ನಾಯಿ ತನ್ನ ಬಾಯಲ್ಲಿ ಮಾನವನ ಕೈಯನ್ನು ಕಚ್ಚಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂದಿದೆ. ಇದನ್ನು ಜನ ನೋಡಿ ಬೆಚ್ಚಿಬಿದ್ದಿದ್ದಾರೆ.
ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ವಕ್ತಾರರಾದ ಸುಧೀರ್ ಸಿಂಗ್ ಈ ಘಟನೆ ಬಗ್ಗೆ ಮಾತನಾಡಿದ್ದಾರೆ, ‘ನಮ್ಮ ತಂಡವು ನಾಯಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಮಾನವನ ಕೈಯ ತುಂಡನ್ನು ನಾಯಿ ಕಚ್ಚಿಕೊಂಡು ಹೋಗುತ್ತಿತ್ತು. ನಾವು ಇದೀಗ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
ಎಕ್ಸ್ ಬಳಕೆದಾರ ಪಿಯೂಷ್ ರೈ ನಾಯಿಯ ಫೋಟೋವನ್ನು ಸಹ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ‘ಯುಪಿಯ ಅತಿದೊಡ್ಡ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ಶ್ವಾನ ತನ್ನ ದವಡೆಯಲ್ಲಿ ಮಾನವ ಕೈ ಕಚ್ಚಿಕೊಂಡು ಹೋಗುವುದಾಗಿ’ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


