ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂಬ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಲಾಗಿದೆ.
ಅಲ್ಲದೆ, ಸಾವಿರಾರು ಕೋಟಿ ಹಗರಣ ನಡೆಸಿದ್ದನ್ನು ಮುಂದಿಟ್ಟುಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಅಣಕಿಸಿ ಪೋಸ್ಟ್ ಮಾಡಲಾಗಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ್ ಎಂಬವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಟಿ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಗ್ರೂಪ್ ತಯಾರಿಸಿ ಅದರಲ್ಲಿ ಸಚಿವರ ಹಾಗೂ ಸಚಿವರ ಪಕ್ಷಕ್ಕೆ ವಿರುದ್ಧವಾದ ಫೋಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


