ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ, ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ, ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಜಗನ್ ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ದಾಖಲಿಸಿದೆ. ಜ್ಯೋತಿಷಿ ವೇಣುಸ್ವಾಮಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿದೆ.
ʻʻಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ ಗೊತ್ತಾಗುತ್ತಿದೆ. ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ.
ನಾನು ಆಂಧ್ರ ರಾಜಕೀಯದ ಬಗ್ಗೆ ಹೇಳಿರುವ ಭವಿಷ್ಯ ತಪ್ಪಾಗಿರುವ ಕಾರಣ, ಇಂದಿನಿಂದ ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ತಮ್ಮ ನಿರ್ಧಾರ ಹೇಳಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


