ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ—ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ ನಿಖಿಲ್ ಸೋಲಿನಿಂದ ನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡೂರು ಸಮೀಪ ಶ್ರೀರಾಮಪುರದಲ್ಲಿ ನಿಖಿಲ್ ಅಭಿಮಾನಿ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತ ಮಂಜುನಾಥ ಅಲಿಯಾಸ್ ಅಭಿ(35) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ತರಾಗಿರುವ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ಶನಿವಾರ ಚುನಾವಣಾ ಫಲಿತಾಂಶ ಹೊರ ಬಿದ್ದಿತ್ತು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆಗಳಲ್ಲೂ ಬಿಜೆಪಿಗೆ ಹೀನಾಯ ಸೋಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q