ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇದಿನಿ ಗ್ರಾಮದ ನಿವಾಸಿ ರಾಚನಾಯಕ(70) ಮೃತ ದುರ್ದೈವಿಯಾಗಿದ್ದಾರೆ.
ಇತ್ತೀಚೆಗೆ ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ವೇಳೆ ರಾಚನಾಯಕ ತನ್ನ ಗದ್ದೆಯ ಕಡೆ ಹೋದಾಗ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296