ಹೆಚ್.ಡಿ.ಕೋಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ವಿಶ್ವಕರ್ಮಸಮಾಜದ ಅಧ್ಯಕ್ಷ ಕುಲುಮೆರಾಜುರವರ ನೇತೃತ್ವದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರರುಣಿ. ನಾನು ಮಾಡಿದ ಅಭಿವೃದ್ಧಿ ಕಾರ್ಯವನ್ನು ನೆನೆಸಿಕೊಂಡು ಅಭಿನಂದನೆ ಸಲ್ಲಿಸುತ್ತಿರುವುದು ವಿಶ್ವಕರ್ಮ ಸಮಾಜದ ಬದ್ದತೆ ಎತ್ತಿ ತೋರುತ್ತದೆ. ಹಾಗಾಗಿ ನಿಮ್ಮ ಆಶೀರ್ವಾದ ನನ್ನ ಮೇಲಿದ್ದರೆ, ನಿಮ್ಮ ಸೇವೆಯನ್ನು ನಾನು ಬದುಕಿರುವವರಗೆ ಮಾಡುತ್ತೇನೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಸಮಾಜದ ನೂರಾರು ಮುಖಂಡರು ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮದ ಗ್ರಾಮಸ್ಥರು ಭಾಗಿಯಾಗಿದ್ದರು. ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಹಾಗೂ ವಿಶ್ವಕರ್ಮ ಸಮಾಜದ ಅದ್ಯಕ್ಷ ಕುಲುಮೆ ರಾಜುರವರನ್ನು ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ನರಸೀಪುರ ರವಿ, ಹೆಚ್.ಸಿ.ನರಸಿಂಹಮೂರ್ತಿ, ಐಡಿಯ ವೆಂಕಟೇಶ, ನಾಗರಾಜು, ನಾಯಾಜ್, ಮೂರ್ತಿಆಚಾರ್, ನಾಗರಾಜು, ಸೌಮ್ಯಮಂಜುನಾಥ್ ಹಾಗೂ ವಿಶ್ವಕರ್ಮ ಸಮಾಜದ ನೂರಾರು ಗ್ರಾಮಸ್ಥರು ಮುಖಂಡರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


