ಬೀದರ್ : ಜಮೀನಿನ ವಿವಾದದಿಂದಾಗಿ ಸಹೋದರ ಸಂಬಂಧಿಗಳ ನಡುವಿನ ಗಲಾಟೆ ನಡೆದು ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಔರಾದ ತಾಲ್ಲೂಕಿನಲ್ಲಿ ನಡೆದಿದೆ.
ಕೊಳ್ಳೂರ ಗ್ರಾಮದ ನಿವಾಸಿ ಗುರಯ್ಯ ಬಂಡಯ್ಯ ಸ್ವಾಮಿ (37) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಶನಿವಾರ ಸಾಯಂಕಾಲ ಆಸ್ತಿ ವಿಚಾರವಾಗಿ ಸಹೋದರ ಸಂಬಂಧಿಗಳ ಮಧ್ಯೆ ವಿವಾದ ಉಂಟಾಗಿದ್ದು, ಈ ವೇಳೆ ಗುರಯ್ಯ ಬಂಡಯ್ಯ ಸ್ವಾಮಿ ಅವರಿಗೆ ಚಾಕುವಿನಿಂದ ಇರಿದಿದ್ದು, ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ, ಚಿಂತಾಕಿ ಪೊಲೀಸ್ ಠಾಣೆ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಘಟನೆ ಸಂಬಂಧ ಕಲ್ಲಯ್ಯ ಸ್ವಾಮಿ ಹಾಗೂ ವಿಜಯಕುಮಾರ್ ಎಂಬವರ ವಿರುದ್ಧ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4