ಚಿತ್ರದುರ್ಗ: ಕುಡಿಯುವ ನೀರಿನ ವಿಚಾರಕ್ಕೆ ಜಗಳ ನಡೆದು ಮದುವೆಯೇ ಮುರಿದು ಬಿದ್ದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಲಿಜ ಶ್ರೇಯ ಭವನದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು. ವಧು ಹಾಗೂ ವರ ಇಬ್ಬರೂ ಇಂಜಿನಿಯರಿಂಗ್ ಪದವೀಧರರಾಗಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು.
ಶನಿವಾರ ಸಂಜೆ ಆರತಕ್ಷತೆ ಮುಗಿಸಿಕೊಂಡು ಊಟಕ್ಕೆ ಹೋದ ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ. ಇದೇ ವಿಚಾರಕ್ಕೆ ವಧು ಹಾಗೂ ವರನ ಕಡೆಯವರ ನಡುವೆ ಜಗಳ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿತ್ತು. ವರನ ಕಡೆಯವರ ಜಗಳ ಕಂಡು ಚಿಂತೆಗೆ ಜಾರಿಗೆ ವಧು ನನಗೆ ಈ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ ಎನ್ನಲಾಗಿದೆ. ಮದುವೆ ಮುರಿದು ಬಿದ್ದ ಹಿನ್ನೆಲೆ ಸಂಬಂಧಿಕರು ಬಂದ ದಾರಿಯಲ್ಲೇ ವಾಪಸ್ ಆಗಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4