ಬೆಳಗಾವಿ: ಬೆಂಕಿಯ ಕೆನ್ನಾಲಿಗೆಗೆ ಸುಮಾರು 1 ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದ್ದು , ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮುಂಜಾನೆಯ ವೇಳೆ ಎಲ್ಲರೂ ಕೆಲಸಕ್ಕೆಂದು ಹೊರಗಡೆ ಹೋದ ಸಂದರ್ಭದಲ್ಲಿ ನಿನ್ನೆ ಮದ್ಯಾಹ್ನ12.30ರಿಂದ ೧ಘಂಟೆ ನಡುವೆ ಗುಡಿಸಲಿಗೆ ಬೆಂಕಿ ಬಿದ್ದಿದ್ದು, ಮನೆಯಲ್ಲಿ ಯಾರೂ ಇಲ್ಲದೆ ಈದ್ದ ಪರಿಣಾಮ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ 5 ಆಡು, 8 ಕೋಳಿ, 2 ಮೋಟಾರ್ ಸೈಕಲ್, ಒಡವೆಗಳು, ಬಂಗಾರ, ಬೆಳ್ಳಿ, ವಸ್ತ್ರಗಳು ಹೀಗೆ ಹಲವಾರು ದಿನ ಬಳಕೆಯ ವಸ್ತುಗಳು ಸುಟ್ಟಿರುವದರಿಂದ ಇಡಿ ಕುಟುಂಬ ತೊಟ್ಟ ಬಟ್ಟೆಯಲ್ಲೇ ಬೀದಿಪಾಲಾದಂತೆ ಆಗಿದೆ. ಬೆಂಕಿ ಅವಘಡದಲ್ಲಿ 20 ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಹಮ್ಜಾಅಲಿ ಆದಮಸಾಬ ಬಾಳೊಬಾ ಇವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿರುವ ಕಾರಣ ಏನೆಂಬುದು ನಿಖರವಾಗಿ ತಿಳಿದು ಬಂದಿಲ್ಲ. ಇನ್ನು ಪ್ರಕರಣ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA