ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಜನತೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಅವಕಾಶವೊಂದು ಲಭಿಸಿದೆ. ಕೆಎಎಸ್ (ಗೆಜೆಟೆಡ್ ಪ್ರೊಬೇಷನರಿ), ಸಹಾಯಕ ಪ್ರಾಧ್ಯಾಪಕರು, ಎಫ್ ಡಿಎ, ಎಸ್ ಡಿಎ, ಪಿಡಿಒ, ಗ್ರೂಪ್–ಸಿ, ಪಿಎಸ್ ಐ, ವಿಎಒ ಹಾಗೂ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ ನೀಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ರಾಜ್ಯದ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯು ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ’ ಎಂಬ ವಿಶೇಷ ಉಚಿತ ತರಬೇತಿ ಯೋಜನೆಯನ್ನು ರೂಪಿಸಿದೆ. ಆರ್ಥಿಕ ಸಮಸ್ಯೆಯಿಂದಾಗಿ ಖಾಸಗಿ ಕೋಚಿಂಗ್ ಪಡೆಯಲು ಸಾಧ್ಯವಾಗದ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಯೋಜನೆ ನೆರವಾಗಲಿದೆ.ಈ ಯೋಜನೆಯಡಿ ರಾಜ್ಯಾದ್ಯಂತ 90 ಸಾವಿರಕ್ಕೂ ಅಧಿಕ ಸ್ಪರ್ಧಾರ್ಥಿಗಳನ್ನು ಆಯ್ಕೆ ಮಾಡಿ ಆನ್ ಲೈನ್ ಮೂಲಕ ಸಂಪೂರ್ಣ ಉಚಿತ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ವಿಷಯಗಳ ಕುರಿತು ಅನುಭವಿ ತಜ್ಞರಿಂದ ಮಾರ್ಗದರ್ಶನ ಹಾಗೂ ಗುಣಮಟ್ಟದ ತರಗತಿಗಳನ್ನು ಒದಗಿಸಲಾಗುತ್ತದೆ.ತರಗತಿಗಳು ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಆಸಕ್ತ ಅಭ್ಯರ್ಥಿಗಳು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಇಲಾಖೆ ಸೂಚಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ತರಬೇತಿ ಪಡೆಯಲು ಆಸಕ್ತರು ಸರ್ಕಾರದ ಅಧಿಕೃತ ಸೇವಾ ಸಿಂಧು ಜಾಲತಾಣದ ಮೂಲಕ ಆನ್ ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಈ ಲಿಂಕ್ ಬಳಸಿ: https://sevaone.karnataka.gov.in/services/renderApplicationForm.do
ನೋಂದಣಿ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಹಂತ ಹಂತವಾಗಿ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಲು ಇಲಾಖೆಯ ಸೂಚನಾ ವಿಡಿಯೋವನ್ನು ವೀಕ್ಷಿಸಬಹುದು.
ವಿಡಿಯೋ ಲಿಂಕ್: https://youtu.be/3kiYvf0ZsW4?si=K0p_D87wkHWwwDtL
ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಅಥವಾ ಸಂದೇಹಗಳಿದ್ದರೆ ಅಭ್ಯರ್ಥಿಗಳು 080-24410574 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಈ ಉಚಿತ ತರಬೇತಿ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
