ಬೆಂಗಳೂರು: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಅಂಗಡಿಗೇ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ನೆನ್ನೆ ಮಧ್ಯಾಹ್ನ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದೆ. ಅದು ಒಮ್ಮಲೆ ಫುಟ್ ಪಾತ್ ಗೆ ನುಗ್ಗಿದೆ.. ಅಲ್ಲಿಂದ ದಾಟಿಕೊಂಡು ಅಂಗಡಿಯೊಂದಕ್ಕೆ ನುಗ್ಗಿದೆ. ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬರ ಕಾಲು ಮುರಿದಿದೆ.. ಫುಟ್ ಪಾತ್‌ನಲ್ಲಿ ಬೈಕ್ ನಿಲ್ಲಿಸುತ್ತಿದ್ದವನ ಮೇಲೆ ನುಗ್ಗಿದ್ದರಿಂದ ಆತನ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ.
ಗಾಯಾಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


