ಹರ್ಯಾಣ: ಹರ್ಯಾಣದ ರೇವಾರಿಯಲ್ಲಿ ಸರ್ಕಾರಿ ಬಸ್ ಮತ್ತು ಕಾರು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ನಡೆದಿದ್ದು, ಐವರು ಮೃತಪಟ್ಟಿದ್ದಾರೆ. ಮೃತರನ್ನು ಚಾರ್ಖಿ ದಾದ್ರಿಯ ಚಾಂಗ್ರೋಡ್ ಗ್ರಾಮದ ಅಜಿತ್ (45), ಸುಂದರ್ (42), ಬಿಲ್ಲು (38) ಮತ್ತು ಭಿವಾನಿ ಜಿಲ್ಲೆಯ ಸೂರತ್ (70) ಮತ್ತು ಪ್ರತಾಪ್ (55) ಎಂದು ಗುರುತಿಸಲಾಗಿದೆ. ಮೃತರೆಲ್ಲ ಹರ್ಯಾಣದ ಚಾರ್ಕಿ ದಾದ್ರಿ ನಿವಾಸಿಗಳು.
ಮೃತರು ಮದುವೆ ಸಮಾರಂಭವೊಂದನ್ನು ಮುಗಿಸಿ ಬರುತ್ತಿದ್ದಾಗ ಮಹೇಂದ್ರಗಢ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಆಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
“ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


