nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    ಜಿಲ್ಲಾ ಸುದ್ದಿ March 17, 2026

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    By adminMarch 17, 2026No Comments2 Mins Read

    ಬಳ್ಳಾರಿ:  ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು.

    ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮಗಳನ್ನು ನಗರದ ಹೊಂಗಿರಣ ಸಭಾಂಗಣದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಬೇಕು. ಅದೇರೀತಿಯಾಗಿ ಮಾ.31 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದ ಪಾರ್ಶ್ವನಾಥ ಬಸದಿಯಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಜಯಂತಿ ಆಚರಣೆಯ ಸಂದರ್ಭದಲ್ಲಿ ಡಿಜೆ ಬಳಕೆ ಮತ್ತು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಾರ್ಯಕ್ರಮದ ವೇದಿಕೆಯಲ್ಲಿ ಮಾತ್ರ ಬ್ಯಾನರ್ ಅಳವಡಿಸಲು ಅವಕಾಶವಿದ್ದು, ನಗರದ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದನ್ನು ನಿರ್ಬಂಧಿಸಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

    ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು. ವಚನ ಸಂಗೀತ ಗಾಯನ ಏರ್ಪಡಿಸಬೇಕು ಎಂದರು.

    ಜಯಂತಿ ಕಾರ್ಯಕ್ರಮಗಳಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ–ಸೂಚನೆ ನೀಡಿದರು.

    ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಡಿಡಿಪಿಐ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು ಮತ್ತು  ಸಮಾಜದ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.