nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂದಗವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅತ್ಯಂತ ಅದ್ಧೂರಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ
    ಕೊರಟಗೆರೆ February 11, 2024

    ಬೂದಗವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅತ್ಯಂತ ಅದ್ಧೂರಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ

    By adminFebruary 11, 2024No Comments2 Mins Read
    samvidhana

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಅತ್ಯಂತ ಅದ್ಧೂರಿಯಿಂದ ಸಂವಿಧಾನ ಜಾಗೃತಿ ಜಾಥ ಯಶಸ್ವಿ ಕಂಡಿದೆ. ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮಕ್ಕೆ ಬಂದ ಸಂವಿಧಾನ ಜಾಗೃತಿ ಜಾಥಾ ರಥವನ್ನು ವಿವಿಧ ಕಲಾ ತಂಡಗಳೊಂದಿಗೆ ಕುಂಭ ಕಳಸ ಹೊತ್ತು ಮಹಿಳೆಯರು ಸ್ವಾಗತಿಸಿಕೊಂಡು ಗ್ರಾಮ ಪಂಚಾಯತ್ ಆಡಳಿತ ವರ್ಗ ಚಾಲನೆ ನೀಡಿತು.

    ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ,ಸಮಾಜ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರ ಆದೇಶದಂತೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳನ್ನ ತಳಿರು ತೋರಣಗಳಿಂದ ಸಿಂಗರಿಸಿ ಅತ್ಯಂತ ಆತ್ಮೀಯವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು..

    ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್, ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಗೌರವಿಸಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ನಿಲುವುಗಳನ್ನ ಪಾಲಿಸಬೇಕು. ಈ ಕಾರ್ಯಕ್ರಮವು ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಪರ ಸಂಘಟನೆಗಳ ಮುಖಂಡರು ಮತ್ತು ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳ ಶ್ರಮದಿಂದ ಮತ್ತು ನಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಾರ್ವಜನಿಕರ ಮಾರ್ಗದರ್ಶನದಿಂದ ಯಶಸ್ವಿಗೊಳಿಸಿದ್ದೇವೆ ಎಂದರು.

    ನಂತರ ಮಾತನಾಡಿದ ದಲಿತ ಪರ ಸಂಘಟನೆಯ ಮುಖಂಡ ದಾಡಿ ವೆಂಕಟೇಶ್‌ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಆಡಳಿತವು ನಾಲ್ಕು ದಿನಗಳ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಯೋಜಿಸಿ ಸಕಲ ಸಿದ್ಧತೆಗಳೊಂದಿಗೆ ಯಶಸ್ವಿ ಕಂಡಿದೆ. ಬಹಳ ಮುಖ್ಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವು ಭಾರತದ ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ ಎಂದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್.ಶ್ರೀನಿವಾಸ್, ಪಿಡಿಓ ರಘು ನಂದನ್, ಇ ಓ ಅಪೂರ್ಣ ಸಿ, ಎಇಇ ರವಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಕುಸುಮ, ಬಿಸಿಎಂ ಇಲಾಖೆಯ ಅನಂತ್ ರಾಮ್, ಬಿಇಓ ನಟರಾಜ್,ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ,ದಲಿತ ಪರ ಸಂಘಟನೆಗಳ ಮುಖಂಡರಾದ ದಾಡಿ ವೆಂಕಟೇಶ್, ಶಿವರಾಮಯ್ಯ,ದೊಡ್ಡಯ್ಯ,ಸಿದ್ದೇಶ್, ಸಿ ಆರ್ ಪಿ ಮೋಹನ್,ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು, ಇಂದಿರಾ ಗಾಂಧಿ ವಸತಿ ಶಾಲೆ ಮತ್ತು ಅಂಬೇಡ್ಕರ್ ಪ್ರೌಢ ಶಾಲೆಯ ಶಿಕ್ಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.