nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026
    Facebook Twitter Instagram
    ಟ್ರೆಂಡಿಂಗ್
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿಗಾಗಿ ಹೋರಾಟ ನಡೆಸಿದ ಹೋರಾಟಗಾರರಿಗೆ ಏ.21ರಂದು ಬೃಹತ್ ಸನ್ಮಾನ ಕಾರ್ಯಕ್ರಮ
    ಪಾವಗಡ April 20, 2025

    ನೀರಿಗಾಗಿ ಹೋರಾಟ ನಡೆಸಿದ ಹೋರಾಟಗಾರರಿಗೆ ಏ.21ರಂದು ಬೃಹತ್ ಸನ್ಮಾನ ಕಾರ್ಯಕ್ರಮ

    By adminApril 20, 2025No Comments2 Mins Read
    s shiva prasad

    ಪಾವಗಡ: ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಕಳೆದ ಹತ್ತು ವರ್ಷಗಳ ಹಿಂದೆ ಪಾವಗಡದಿಂದ ಬೆಂಗಳೂರಿನವರಿಗೂ ಪಾದಯಾತ್ರೆ ನಡೆಸಿದಂತಹ ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆ, ರೈತ ಸಂಘ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಮತ್ತಿತರ  ಹೋರಾಟಗಾರರ ಹೋರಾಟದ ಫಲವಾಗಿ ಪಾವಗಡ ತಾಲೂಕಿಗೆ ತುಂಗಭದ್ರಾ ಡ್ಯಾಮ್ ನಿಂದ ಶುದ್ಧ ಕುಡಿಯುವ ನೀರು ಸರಬರಾಜಾಗಲು ಕ್ಷಣಗಣನೆ ಶುರುವಾಗಿದೆ.

    ಈ ಹಿನ್ನಲೆಯಲ್ಲಿ  ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಏ.21ನೇ ತಾರೀಕಿನ ಸೋಮವಾರದಂದು ಬೃಹತ್ ಸನ್ಮಾನ ಕಾರ್ಯಕ್ರಮವನ್ನು ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು   ವೇದಿಕೆಯ ಅಧ್ಯಕ್ಷರಾದ ಎಸ್.ಶಿವಪ್ರಸಾದ್ ತಿಳಿಸಿದರು

    ಪಟ್ಟಣದ ನಿರಕ್ಷಣಾ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾವಗಡ ತಾಲೂಕು ಅನೇಕ ವರ್ಷಗಳಿಂದ ಶಾಶ್ವತ ಕುಡಿಯಲು ಮತ್ತು ಕೃಷಿಗೆ ನೀರಿಲ್ಲದೆ ನಲುಗಾಡಿದ್ದು 10 ವರ್ಷಗಳ ಹಿಂದೆ ನಡೆದ ಅನೇಕ ಪ್ರತಿಭಟನೆ,ಹೋರಾಟಗಳ ಫಲವಾಗಿ ತುಂಗಭದ್ರಾ ಕುಡಿಯುವ ನೀರು ಬರುತ್ತಿದ್ದು, ಈ ಶುಭಗಳಿಗೆಯಲ್ಲಿ ಹೋರಾಟಗಾರರ ಸನ್ಮಾನಿಸಲು ತೀರ್ಮಾನಿಸಲಾಗಿದ್ದು ಅದೇ ಸಂದರ್ಭದಲ್ಲಿ ಇನ್ನಿತರ ನೀರಾವರಿ ಯೋಜನೆಗಳನ್ನ ಶೀಘ್ರವಾಗಿ ಜಾರಿಗೊಳಿಸಲು ಹಕ್ಕೋತಾಯ ಮಂಡಿಸಲಾಗುವುದೆಂದು ತಿಳಿಸಿದರು

    ವೇದಿಕೆಯ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ಗುರುಭವನ ಮೈದಾನದಿಂದ ಬಳ್ಳಾರಿ ರಸ್ತೆಯ ಮೂಲಕ ವಿವಿಧ ಸಂಸ್ಕೃತಿಕ ಕಲಾತಂಡಗಳು ರೈತರು ಹೋರಾಟಗಾರರ ಬೃಹತ್ ಮೆರವಣಿಗೆಯ ನಂತರ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ 200 ಕ್ಕೂ ಅಧಿಕ ಜನ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಈ ಒಂದು ಸನ್ಮಾನ್ಯ ಮುಂದಿನ ಪೀಳಿಗೆಗೆ ದಿಟ್ಟ ಹೆಜ್ಜೆಯಂತಿರಲು ಸ್ಪೂರ್ತಿಯೋಗಲು ತಾವೆಲ್ಲ ಪಾಲ್ಗೊಂಡು ಸಹಕರಿಸಬೇಕೆಂದು ತಾಲೂಕಿನ ಜನತೆಗೆ ವಿನಂತಿಸಿದರು

    ಮೆರವಣಿಗೆಯನ್ನು ಉದ್ಘಾಟನೆಯನ್ನು ರಾಮಕೃಷ್ಣ ಸೇವಾಶ್ರಮದ ಜಪಾನಂದ ಸ್ವಾಮೀಜಿ, ಗುರುಗುಂಡ ಮಹಾ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ, ಬಾಳೆಹೊನ್ನೂರು ಶಾಖ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಏಲಾರಂಪುರ ಮಠದ ಶ್ರೀ ಹನುಮಂತನಾಥ ಮಹಾಸ್ವಾಮೀಜಿ, ಸಂಸ್ಥಾನದ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಸರ್ವಧರ್ಮ ಶಾಂತಿ ಪೀಠದ ಸಿದ್ದಾಪುರ ರಮೂರ್ತಿ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರಾದ ಜಿ.ನರಸಿಂಹ ರೆಡ್ಡಿ, ಚಿಂತಕರಾದ ಪುರುಷೋತ್ತಮ ರೆಡ್ಡಿ, ಜೆಡಿಎಸ್ ಪಕ್ಷದ ಗೌರವಾಧ್ಯಕ್ಷರಾದ ರಾಜಶೇಖರಪ್ಪ, ಮಾತನಾಡಿದರು

    ಮುಖಂಡರಾದ ಜಿ ಟಿ ಗಿರೀಶ್, ಶಿವಕುಮಾರ್ ಸಾಕೇಲ್, ಕಾವಲಗೇರಿ ರಾಮಾಂಜಿ, ಬ್ಯಾಡನೂರು ಶಿವು, ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ರಾಂಚಿ (ಜಾರ್ಖಂಡ್): ಮದ್ಯದಂಗಡಿಗೆ ನುಗ್ಗಿದ ಕೋತಿಯೊಂದು ಕೈಗೆ ಸಿಕ್ಕ ಬಾಟಲಿ ತೆಗೆದುಕೊಂಡು ಕಂಠಪೂರ್ತಿ ಮದ್ಯ ಸೇವಿಸಿ, ಬಳಿಕ ಪ್ರಜ್ಞೆ ತಪ್ಪಿ…

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.