ತುಮಕೂರು: ಶ್ರವಣಬೆಳಗೊಳದ ಶ್ರೀ ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ತುಮಕೂರು ನಗರಕ್ಕೆ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಗಮಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಚಾಲನೆ ನೀಡಿದರು.
ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಸ್ವಾಮೀಜಿ ಅವರನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು. ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರು. ವಾದ್ಯ ವೃಂದ, ಹಾಗೂ ಜೈನ ಸಮುದಾಯದವರು ಪಾಲ್ಗೊಂಡಿದ್ದರು.
ಶೋಭಯಾತ್ರೆಯು ಎಂ.ಜಿ. ರಸ್ತೆ, ಗುಂಚಿ ಚೌಕ, ಚರ್ಚ್ ಸರ್ಕಲ್, ಮಂಡಿಪೇಟೆ ಸರ್ಕಲ್ ಮಾಗವಾಗಿ ಪಾಶ್ವನಾಥ ದಿಗಂಬರ ಜಿನಮಂದಿರ ತಲುಪಿತು.
ಜಿನಮಂದಿರದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜಾದಿಗಳನ್ನು ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx