ಬೆಂಗಳೂರು: 2025ನೇ ಇಸವಿಯನ್ನು ದೇಶಾದ್ಯಂತ ಜನರು ಬೆಳಗ್ಗೆಯಿಂದಲೇ ದೇವಸ್ಥಾನಗಳಿಗೆ ಹೋಗಿ ಪೂಜೆ–ಪುನಸ್ಕಾರಗಳ ಮೂಲಕ ಬರಮಾಡಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಕಳೆಗಟ್ಟಿದೆ.
ಅಯೋಧ್ಯೆ ಸೇರಿ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ವೈಭವ ನಡೆಯುತ್ತಿದೆ. ಇಂದು ಬೆಳ್ಳಂಬೆಳಗ್ಗೆಯೇ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತಿದ್ದಾರೆ. ಅಯೋಧ್ಯೆಯ ಸರಯೂ ನದಿ ತೀರದಲ್ಲಿ ಭಕ್ತರು ಗಂಗಾ ಮಾತೆ ಮತ್ತು ಸೂರ್ಯನಿಗೆ ದೀಪ ಬೆಳಗುವುದು ಕಂಡುಬಂತು.
ಅದೇ ರೀತಿ ಪಂಜಾಬ್ ನಲ್ಲಿರುವ ಅಮೃತ್ ಸರ್ ಸ್ವರ್ಣಮಂದಿರದಲ್ಲೂ ಭಕ್ತರ ದಂಡು ಕಂಡುಬಂದಿತು. ಬೆಳಗ್ಗೆ ಕುಟುಂಬ ಸಮೇತ ಮಂದಿರಕ್ಕೆ ಆಗಮಿಸಿದ ಭಕ್ತರು, ಹೊಸ ವರ್ಷವನ್ನು ಸ್ವಾಗತಿಸಿದರು.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೊಸ ವರ್ಷ 2025ನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಸ್ಥಳಗಳಲ್ಲಿ ಯುವಜನರು ಸೇರಿದಂತೆ ಅಪಾರ ಜನಸಮೂಹ ಕೇಕ್ ಕತ್ತರಿಸಿ, ಪಟಾಕಿ ಸಿಡಿಸುವುದರ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx