ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಟಾಟಾ ಎಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನ ದಸ್ತಗಿರಿ ದಾವಲ್ ಸಾಬ್ (36), ರಸೀದಾ ಶೇಕ್( 41), ಚಾಲಕ ವಲಿ( 31) , ಅಮಾಮ್ ಶೇಕ್( 51) ಎಂದು ಗುರುತಿಸಲಾಗಿದೆ. ಐವರು ಗಾಯಾಳುಗಳನ್ನು ಬೀದರ್ ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂತ್ರಸ್ತರು ಮಹಾರಾಷ್ಟ್ರದ ಉಗ್ಗೀರ್ ಮೂಲದವರು ಎಂದು ತಿಳಿದುಬಂದಿದೆ. ಒಟ್ಟೂ 14 ಜನರು ಉಗ್ಗೀರ್ ನಿಂದ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಸಿದೆ. ದನ್ನೂರು ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


