ತಿಪಟೂರು: ಟಿವಿಎಸ್ ಮತ್ತು ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ವಿಚಕ್ರ ವಾಹನ ಟಿವಿಎಸ್ ನಲ್ಲಿ ಸಂಚಾರ ಮಾಡುತ್ತಿದ್ದ ಹೊನ್ನವಳ್ಳಿಯ ಗ್ರಾಮದ ಲೋಕೇಶ್(44) ಎಂಬುವರು ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ದುರ್ದೈವಿಯಾಗಿದ್ದಾರೆ.
ಮೃತ ವ್ಯಕ್ತಿಯು ಹೊನವಳ್ಳಿ ಗ್ರಾಮದ ನೇಕಾರ ಕೆಲಸವನ್ನು ಮಾಡುತ್ತಿದ್ದರು ಎನ್ನಲಾಗಿದೆ. ಎರಡು ವಾಹನಗಳು ಮುಖಾಮುಖಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಲೋಕೇಶ್ ನನ್ನು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆ ತಿಪಟೂರಿಗೆ ದಾಖಲು ಮಾಡಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಲೋಕೇಶ್ ಸಾವನ್ನಪ್ಪಿದ್ದಾರೆ.
ಓಮಿನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯು ಹೊನ್ನವಳ್ಳಿ ಬಾರ್ ಮಾಲಿಕ ಹನುಮಂತಪುರದ ಪ್ರೇಮಕುಮಾರ ಎಂದು ತಿಳಿದಿದೆ. ಈ ಪ್ರಕರಣವು ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


