ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೂ ಭಾರೀ ಹೊಡೆತ ನೀಡುತ್ತಿದೆ.
ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರೀ ಇಳಿಕೆಯಾಗಿದೆ. 10 ವರ್ಷಗಳಲ್ಲೇ ಅತೀ ಕಡಿಮೆ ಪ್ರವಾಸಿಗರು ಹಂಪಿಗೆ ಭೇಟಿ ನೀಡುತ್ತಿದ್ದಾರೆ. ಸಾಮಾನ್ಯವಾಗಿ ದಿನಕ್ಕೆ 5,000 ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇದೀಗ ಈ ಸಂಖ್ಯೆ ಕೇವಲ 150ಕ್ಕೆ ಇಳಿಕೆಯಾಗಿದೆ.
ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದರಿಂದ ಮಾರಾಟಗಾರರು, ಸಣ್ಣ ಅಂಗಡಿಗಳ ವರ್ತಕರ ಜೀವನೋಪಾಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇಲ್ಲಿನ ಹೊಟೇಲ್ ಉದ್ಯಮದ ಮೇಲೆ ಕೂಡ ಇದು ಪರಿಣಾಮ ಬೀರಿದೆ.
ಹಂಪಿಯ ಹೋಟೆಲ್ ಗಳಲ್ಲಿ ಕೊಠಡಿ ಬುಕಿಂಗ್ ಶೇಕಡಾ 20 ಕ್ಕೆ ಕುಸಿದಿದೆ. ಸಾಮಾನ್ಯವಾಗಿ ನಮ್ಮಲ್ಲಿರುವ 200 ಕೊಠಡಿಗಳಲ್ಲಿ 180 ಕೊಠಡಿಗಳು ಭರ್ತಿಯಾಗುತ್ತಿದ್ದವು. ಈಗ ಅವುಗಳಲ್ಲಿ ಕೇವಲ 30 ಬುಕ್ ಆಗಿವೆ ಎಂದು ಹೊಟೇಲ್ ಮಾಲಿಕರು ಹೇಳುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


