ಸರಗೂರು: ಮಾದಿಗ ಸಮುದಾಯ ಜನರಿಗೆ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಡಿ.11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ತಾಲೂಕಿನ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸುವಂತೆ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳುನಾಗಣ್ಣ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು ವರ್ಷಗಳಿಂದ ಮಾದಿಗ ಜನಾಂಗದವರಾದ ನಾವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ರಾಜಕೀಯವಾಗಿ ವಂಚಿತರಾಗಿದ್ದು, ನಮ್ಮ ಸೌಲಭ್ಯಕ್ಕಾಗಿ ವಿವಿಧ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ಕೈಗೊಂಡರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಬಾಬು ಜಗಜೀವನರಾಂ ವಿಚಾರ ವೇದಿಕೆ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ ಬೆಟ್ಟಸ್ವಾಮಿ ಮಾತನಾಡಿ, ಅಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರಾದ ಸಮಾವೇಶಕ್ಕೆ ಬಂದಂತಹ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶದಲ್ಲಿ ಹಲವಾರು ನಮ್ಮ ಮಾದಿಗ ಜನಾಂಗದ ಜನರು ಪ್ರಾಣತ್ಯಾಗ ಮಾಡಿದರು. ಅಂದಿನ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನನ್ನು ಜಾರಿ ಮಾಡದೇ ಇದ್ದು, ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದರೂ ನಮ್ಮ ಮಾದಿಗ ಜನಾಂಗದವರಿಗೆ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಸುಳ್ಳು ಆಶ್ವಾಸನೆ ನೀಡಿ ಚುನಾವಣೆ ಮತವನ್ನು ಪಡೆಯುತ್ತಿದ್ದಾರೆ ಎಂದರು.
ಈಗಿನ ಬಿಜೆಪಿ ಸರ್ಕಾರ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಎಲ್ಲಾ ರಾಜಕೀಯ ಪಕ್ಷಗಳ ಶಾಸಕರ ಒಪ್ಪಿಗೆ ಪಡೆದು ಶಾಸಕಾಂಗ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಅನುಮೋದಿಸಿ ಮಾದಿಗ ಜನಾಂಗದವರಿಗೆ ಅನುಕೂಲವಾಗುವಂತೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆಯ ಗೌರವಾಧ್ಯಕ್ಷರು ವೈಕುಂಠಯ್ಯ, ಎಂ ಎಸ್ ನಾಗಯ್ಯ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆನು, ಗಡಿಯಜಮಾರು ವೆಂಕಟೇಶ್, ಯಜಮಾರು ಸ್ವಾಮಿ, ಸುರೇಶ್ ಮತ್ತಿತರ ಮುಖಂಡರು ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz