ತುಮಕೂರು: ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ(NIELIT), ನ್ಯಾಷನಲ್ ಕೆರಿಯರ್ ಸರ್ವಿಸ್(NCS), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಬೆಂಗಳೂರಿನ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 20ರಂದು ಉದ್ಯೋಗಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಜಾಲತಾಣ: https://jobfair.calicut.nielit.in ಮೂಲಕ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296