ಕೋಲ್ಕತ್ತಾ: ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಇತ್ತೀಚೆಗೆ ಪಿಂಕ್ ಮೊಬೈಲ್ ವ್ಯಾನ್ ಗಳನ್ನು ಸ್ಥಾಪಿಸಿತ್ತು. ಈ ವ್ಯಾನ್ ಗಳಲ್ಲಿ ಗಸ್ತು ತಿರುಗಿ ಮಹಿಳೆಯರ ಸುರಕ್ಷತೆಗೆ ಕ್ರಮಕೈಗೊಳ್ಳಲಾಗುತ್ತಿದೆ. ಆದರೆ, ಕರ್ತವ್ಯ ನಿರತ ಮಹಿಳಾ ಸಹಾಯಕ ಸಬ್ ಇನ್ಸ್‌ಪೆಕ್ಟರ್ ತನಿಯಾ ರಾಯ್ ಎಂಬವರು ಕುಡಿದ ಮತ್ತಿನಲ್ಲಿ ತಾನೇ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.
ಸಿಲಿಗುರಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ತಾನಿಯಾ ಕುಡಿದ ಮತ್ತಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ತಾನಿಯಾಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿದ್ದ ಮಹಿಳೆಗೆ ತಾನಿಯಾ ಲಿಪ್ ಕಿಸ್ ಕೊಡಲು ಯತ್ನಿಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ.
ತಾನಿಯಾ ಅವರ ಈ ವರ್ತನೆಯಿಂದ ಆಕ್ರೋಶಗೊಂಡ ಜನರು ಆಕೆಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಉಳಿದ ಪೊಲೀಸರು ಅವರು ತಡೆಯಲು ಯತ್ನಿಸಿದರು.
ಈ ಘಟನೆಯ ವಿರುದ್ಧ ನೆಟ್ಟಿಗರು ಮತ್ತು ಬಿಜೆಪಿ ಪಕ್ಷದ ನಾಯಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q