ತುಮಕೂರು: ಮನೆಯ ಮುಂದಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ತೊರೆಮಾವಿನಹಳ್ಳಿಯಲ್ಲಿ ನಡೆದಿದೆ.
ಚಿರತೆ ನಾಯಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೊರೆಮಾವಿನಹಳ್ಳಿ ಶಂಕರಲಿಂಗಯ್ಯ ಎಂಬುವರ ಮನೆಯಂಗಳಕ್ಕೆ ಬಂದ ಚಿರತೆ ಮನೆಯ ಮುಂದೆ ಮಲಗಿದ್ದ ನಾಯಿಯನ್ನು ಹೊತ್ತೊಯ್ದಿದೆ.
ತಡರಾತ್ರಿ ಮನೆಯ ಅವರಣಕ್ಕೆ ನುಗ್ಗಿ ಸಾಕು ನಾಯಿಯನ್ನ ಚಿರತೆ ಎಳೆದೊಯ್ದಿದೆ. ಕೆಳ ದಿನಗಳಿಂದ ತೊರೆಮಾವಿನಹಳ್ಳಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ.
ಸದ್ಯ ಚಿರತೆ ಓಡಾಟ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರ ಬರಲು ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರು ಮನವಿ. ಮಾಡಿಕೊಂಡಿದ್ದಾರೆ. ಈ ಘಟನೆ ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4