ಎಕ್ಸ್ ಬಾಕ್ಸ್ ಕಂಟ್ರೋಲರ್ ಅರ್ಡರ್ ಮಾಡಿದ್ದ ದಂಪತಿಗೆ ಅಮೆಜಾನ್ ಬಾಕ್ಸ್‌ನಲ್ಲಿ ಬಂದಿದ್ದು ಮಾತ್ರ ಜೀವಂತ ನಾಗರ ಹಾವು.
ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ. ದಂಪತಿಗಳಿಗೆ ಬಂದ ಅಮೆಜಾನ್ ಪ್ಯಾಕೇಜ್ ನಲ್ಲಿ ಜೀವಂತ ನಾಗರಹಾವು ಕಂಡುಬಂದಿದ್ದು, ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ವಾಸವಿರುವ ಇಂಜಿನಿಯರ್ ದಂಪತಿ ಆನ್ ಲೈನ್ ವಿತರಣಾ ಪ್ಲಾಟ್ ಫಾರ್ಮ್ ಅಮೆಜಾನ್ ನಲ್ಲಿ ಎಕ್ಸ್ ಬಾಕ್ಸ್ ಕಂಟ್ರೋಲರ್ ಅನ್ನು ಆರ್ಡರ್ ಮಾಡಿದ್ದರು. ಆದರೆ, ಅವರು ಪ್ಯಾಕೇಜ್ ಸ್ವೀಕರಿಸಿದಾಗ ಮಾತ್ರ ಪಾರ್ಸಲ್‌ನಲ್ಲಿ ಇದ್ದದ್ದು ನಾಗರಹಾವು. ದಂಪತಿಗಳ ಹೇಳಿದ ಪ್ರಕಾರ, “ನಾವು ಅಮೆಜಾನ್‌ನಿಂದ 2 ದಿನಗಳ ಹಿಂದೆ ಎಕ್ಸ್ ಬಾಕ್ಸ್ ಕಂಟ್ರೋಲರ್ ನ್ನು ಆರ್ಡರ್ ಮಾಡಿದ್ದೆವು. ಅಮೆಜಾನ್‌ನಿಂದ ಬಂದ ಪ್ಯಾಕೇಜ್ ನಲ್ಲಿ ಜೀವಂತ ಹಾವು ಬಂದಿದೆ. ಪ್ಯಾಕೇಜ್ ಅನ್ನು ನೇರವಾಗಿ ಡಿಲೆವರಿ ಪಾರ್ಟ್ನರ್ ನಮಗೆ ನೀಡಿದ್ದಾರೆ. ಅವರು ಹೊರಗೆ ಇಟ್ಟು ಹೋಗಿಲ್ಲ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದೇವೆ, ಜೊತೆಗೆ ನಮ್ಮಲ್ಲಿ ಪ್ರತ್ಯಕ್ಷದರ್ಶಿಗಳು ಇದ್ದಾರೆ” ಎಂದು ಪಡೆದ ಗ್ರಾಹಕರು ತಿಳಿಸಿದ್ದಾರೆ.
ಪಾರ್ಸಲ್‌ನಲ್ಲಿ ಇರುವ ಹಾವಿನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಧ ತೆರೆದಿರುವ ಅಮೆಜಾನ್ ಪ್ಯಾಕೇಜ್ ಅನ್ನು ಬಕೆಟ್ ನೊಳಗೆ ಇರಿಸಿರುವುದನ್ನು ವೀಡಿಯೊದಲ್ಲಿ ನೋಡಬಹುದು. ಪ್ಯಾಕೇಜಿಂಗ್ ಟೇಪ್ ನಲ್ಲಿ ಸಿಲುಕಿರುವ ಹಾವು ಅಲುಗಾಡುತ್ತಿದೆ ಮತ್ತು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಹಾವನ್ನು ಸೆರೆಹಿಡಿದು ನಂತರ ಜನರ ಕೈಗೆ ಸಿಗದಂತೆ ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


