ಹಾಸನ: ಒಂಟಿ ಸಲಗವೊಂದು ಮರವನ್ನು ರಸ್ತೆಗೆ ಬೀಳಿಸಿದ ಪರಿಣಾಮ ವಾಹನ ಸವಾರರು ಪರದಾಡಿರುವ ಘಟನೆ ಸಕಲೇಶಪುರದ ಹಳ್ಳಿಬೈಲು ಗ್ರಾಮದ ಬಳಿಯಲ್ಲಿ ನಡೆದಿದೆ.
ಗುರುವಾರ ರಾತ್ರಿ ಒಂಟಿಸಲಗ ಬೈನೆ ಮರವನ್ನು ನೆಲಕ್ಕುರುಳಿಸಿ, ಆರಾಮವಾಗಿ ತಿನ್ನುತ್ತಾ ನಿಂತಿದೆ. ಇದರಿಂದಾಗಿ ವಾಹನ ಸವಾರರು ಪರದಾಡಿದ್ದು, ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.
ಬಳಿಕ ವಿಡಿಯೋ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬರುವಂತೆ ಚಾಲಕರು ಒತ್ತಾಯಿಸಿದ್ದರು. ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ ಬಂದು ಪಟಾಕಿ ಸಿಡಿಸಿ ಸಲಗವನ್ನು ಕಾಡಿಗೆ ಓಡಿಸಿದ್ದಾರೆ. ಬಳಿಕ ಸುರಿಯುತ್ತಿರುವ ಮಳೆಯಲ್ಲಿಯೇ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC