ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳಾದ ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು.
ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


