ತುಮಕೂರು: ಸಚಿವ ಮಧು ಬಂಗಾರಪ್ಪ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿರುವ ಘಟನೆ ತುಮಕೂರು ಹೊರವಲಯದ ಕ್ಯಾತ್ಸಂದ್ರ ಬಳಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಸಚಿವ ಮಧು ಬಂಗಾರಪ್ಪ ಅವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಅಪಾಯದಿಂದ ಪಾರಾಗಿದ್ದಾರೆ.
ಸಚಿವ ಮಧು ಬಂಗಾರಪ್ಪ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರನ್ನು ಉಜ್ಜಿಕೊಂಡು ಲಾರಿ ಹೋಗಿದೆ. ಇದರಿಂದಾಗಿ ಕಾರಿನ ಮುಂಭಾಗ ಕಿತ್ತು ಹೋಗಿದೆ. ಸ್ವಲ್ಪದರಲ್ಲಿ ತಪ್ಪಿದ ದುರಂತವಾಗಿದೆ.
ನಿನ್ನೆ ತಡರಾತ್ರಿ ನಡೆದಿರುವ ಅಪಘಾತವಾಗಿದ್ದು ನಂತರ ಸಚಿವ ಮಧು ಬಂಗಾರಪ್ಪ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು. ಈ ಘಟನೆ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ