ಯಾದಗಿರಿ: ಗ್ಯಾಸ್ ಸಿಲಿಂಡರ್ ಗಳು ಪೂರೈಸುವ ಲಾರಿಯೊಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿರುವ ಘಟನೆ ಯಾದಗಿರಿಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ತಲೆಕೆಳಗಾಗಿ ನದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ಯಾವುದೆ ಹಾನಿ ಸಂಭವಿಸಿಲ್ಲ. ಚಾಲಕನೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಕೊಡೇಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


