ಹಾವೇರಿ: ಪ್ರಿಯಕರನೊಬ್ಬ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿಯಾಗಿದ್ದಾಳೆ.
ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಪ್ರಿಯತಮೆಯು ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಸ್ ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


