ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗಲ್ಲಿ ತನ್ನ ಇಚ್ಚೆಯಂತೆ ನಡೆದುಕೊಳ್ಳಲು ನಿರಾಕರಿಸಿದ ಪ್ರೇಯಸಿಗೆ, ಪ್ರಿಯಕರ ಚಾಕುವಿನಿಂದ ಇರಿದ ಘಟನೆ ನಡೆದಿದೆ. ರವಿಶಂಕರ್(42) ಆರೋಪಿಯಾಗಿದ್ದಾನೆ.
ಆಟೋ ಚಾಲಕನಾಗಿರುವ ನಂದನಗದ್ದಾ ನಿವಾಸಿ ರವಿಶಂಕರ್ (42) ಮತ್ತು ಕಾಜುಭಾಗ್ ನಿವಾಸಿಯಾದ ಮಹಿಳೆಯ ಜೊತೆ ಪ್ರೇಮ ಸಂಬಂಧ ಹೊಂದಿದ್ದನು. ಕಳೆದ ಕೆಲವು ತಿಂಗಳಿನಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಾ, ಗುಪ್ತವಾಗಿ ಭೇಟಿಯಾಗುತ್ತಿದ್ದರು. ಆದರೆ, ಹಣದ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಇದೇ ವೇಳೆ ಕುಪಿತಗೊಂಡು ರವಿಶಂಕರ್, ಚಾಕುವಿನಿಂದ ಪ್ರೇಯಸಿಯ ಎದೆಗೆ ಇರಿದಿದ್ದಾನೆ.
ಸದ್ಯ, ಆರೋಪಿ ರವಿಶಂಕರ್ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಇತ್ತ, ಚಾಕು ಇರಿತಕ್ಕೊಳಗಾದ ಮಹಿಳೆಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನೀಡಲಾಗುತ್ತಿದ್ದು, ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296