ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದಾರೆ.
ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296