ತಮ್ಮ ಮೇಲೆ ಕಳ್ಳತನ ಆರೋಪ ಹೊರಿಸಿದ್ದರಿಂದ ನೊಂದಿದ್ದರು ಎನ್ನಲಾದ ಜಿಮೋನ್ ವರ್ಗಿಸ್ (43)ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದ ಜಿಮೋನ್ ವರ್ಗಿಸ್, ಕೆಲಸ ಹುಡುಕಿಕೊಂಡು ವರ್ಷದ ಹಿಂದೆ ನಗರಕ್ಕೆ ಬಂದಿದ್ದರು. ಮಹಿಳಾ ಉದ್ಯಮಿಯೊಬ್ಬರ ಮನೆಯಲ್ಲಿ ಚಾಲಕರಾಗಿ ಕೆಲಸಕ್ಕೆ ಸೇರಿದ್ದರು. ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಶೌಚಾಲಯದ ಕಿಟಕಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.


