ವಾರಣಾಸಿ: ಜಿಮ್ ನಲ್ಲಿ ವರ್ಕ್ ಔಟ್ ಮಾಡಿ ಕುಳಿತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನೆನ್ನೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ದೀಪಕ್ ಗುಪ್ತ(32) ಎಂದು ಗುರುತಿಸಲಾಗಿದ್ದು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೀಪಕ್ ಗುಪ್ತಾ ಜಿಮ್ ನಲ್ಲಿ ವ್ಯಾಯಾಮ ಮಾಡಿ ಬಳಿಕ ಅಲ್ಲೇ ಕುಳಿತ್ತಿದ್ದರು ಈ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ ಈ ಸಮಯದಲ್ಲಿ ಅಲ್ಲಿದ್ದ ಇತರ ಸಹದ್ಯೋಗಿಗಳು ಸಹಾಯಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಪರಿಶೀಲಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ನಡೆಸಿದ ವೈದ್ಯರು ದೀಪಕ್ ಬ್ರೈನ್ ಸ್ಟ್ರೋಕ್ಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಅಲ್ಲದೆ ಜಿಮ್ ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದೀಪಕ್ ತಲೆಗೆ ಕೈ ಹಿಡಿದುಕೊಂಡಿರುವುದು ಕಾಣಿಸಿಕೊಂಡಿದೆ. ಇತ್ತೀಚೆಗೆ ಕೋವಿಶೀಲ್ಡ್ ತೆಗೆದುಕೊಂಡವರಿಗೂ ಇಂತಹ ಲಕ್ಷಣಗಳಿರುವ ಬಗ್ಗೆ ಕಂಪನಿಯೇ ಒಪ್ಪಿಕೊಂಡಿತ್ತು. ಸದ್ಯ ಪ್ರಕರಣ ದಾಖಲಾಗಿದ್ದು ದೀಪಕ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ವರದಿ ಎಂದು ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA