ಬೆಂಗಳೂರು: ನಗರದ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಡೆದಿದೆ. ಗಿರಿಜಾ ಮೃತ ಮಹಿಳೆಯಾಗಿದ್ದಾರೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ.
ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದು, ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಪತಿ ಹಾಗೂ ಪತ್ನಿಯ ನಡುವೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296