ಗದಗ: ಇತ್ತೀಚಿನ ದಿನಗಳಲ್ಲಿ ಜೀವ ಕೊಡಬೇಕಾದ ತಾಯಿಯೇ ಜೀವ ತೆಗೆಯುವ ನೀಚ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹದ್ದೇ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸಾರ್ವಜನಿಕ ಶೌಚಾಲಯದಲ್ಲಿ ಹೆಣ್ಣು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಹೆತ್ತ ತಾಯಿಯೇ ತನ್ನ ನವಜಾತ ಶಿಶುವೊಂದನ್ನು ಶೌಚಾಲಯದಲ್ಲಿ ಎಸೆದು ಜಾಗ ಖಾಲಿ ಮಾಡಿದ ಅಮಾನವೀಯ ಕೃತ್ಯ ನಡೆದಿದೆ. ಗದಗದ ಬೆಟಗೇರಿಯ ಹುಯಿಲಗೋಳ ರಸ್ತೆಯ ವೆಂಕಟೇಶ್ವರ ಕಲ್ಯಾಣ ಮಂಟಪ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ ಘಟನೆ ನಡೆದಿದೆ.
ರಾತ್ರಿ ಹೆರಿಗೆ ಆದ ಮೇಲೆ ಶೌಚಾಲಯದಲ್ಲೇ ಮಾಂಸದ ಮುದ್ದೆ ಸಮೇತ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾಳೆ. ನವಜಾತ ಶಿಶುವಿನ ದೇಹದ ತುಂಬೆಲ್ಲ ಇರುವೆಗಳು ಮೆತ್ತಿಕೊಂಡು ಮೃತ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಸಾರ್ವಜನಿಕರು ಬಂದು ನೋಡಿದಾಗ ಕೃತ್ಯ ಬಯಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


