ಗೃಹ ಇಲಾಖೆಯಲ್ಲಿ ವರ್ಗಾವಣೆ ಬಾಕಿ ಹಿನ್ನೆಲೆ ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಡಿಜಿ, ಐಜಿಪಿ ಕೂಡ ಉಪಸ್ಥಿತರಿದ್ದರು. ಯಾವುದೇ ಮಾಹಿತಿ ನೀಡದೆ ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಲಾಗುತ್ತಿದ್ದು, ಇತ್ತೀಚೆಗಷ್ಟೇ ಗೃಹ ಇಲಾಖೆ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು.
ಗೃಹ ಇಲಾಖೆಯಲ್ಲಿ ವರ್ಗಾವಣೆ ಆಗಿಲ್ಲ ಅಂತ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಕಿರುಕುಳ ಕೊಟ್ಟ ಅಧಿಕಾರಿಗಳ ಜೊತೆ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಗೃಹ ಸಚಿವರ ಜೊತೆ ಸೇರಿ ವರ್ಗಾವಣೆಗೆ, ಸಿಎಂ ಸಿದ್ದರಾಮಯ್ಯ ವರ್ಗಾವಣೆ ಲಿಸ್ಟ್ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


