ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವ (34), ಸುಷ್ಮ (28) ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ.
ದಂಪತಿ ತಮಗೆ ಪರಿಚಯಸ್ಥನಾಗಿದ್ದ ಶಿವು ಎಂಬಾತನಿಗೆ ಬೇರೊಬ್ಬರಿಂದ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಈ ಸಾಲವನ್ನು ಶಿವು ತೀರಿಸಿರಲಿಲ್ಲ. ಸಾಲಕೊಟ್ಟವರು ಹಣ ಕೊಡುವಂತೆ ವಿಶ್ವನನ್ನು ಕೇಳುತ್ತಿದ್ದರು ಎಂದು ತಿಳಿದು ಬಂದಿದೆ.
ಇದರಿಂದ ನೊಂದ ದಂಪತಿ ಸಾಲ ನೀಡಿದ್ದ ರಾಜಣ್ಣನ ವಿರುದ್ಧ ಕಿರುಕುಳ ಆರೋಪ ಮಾಡಿ, ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


