ತುಮಕೂರು: ತುಮಕೂರು ನಗರದ ನೃಪತುಂಗ ವಾರ್ಡ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ವಿಶ್ರಾಂತಿ ವನವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಸಾರ್ವಜನಿಕರು ಹರಿಹಾಯ್ದಿದ್ದಾರೆ.

ಪಾರ್ಕ್ ನಲ್ಲಿ ಅವಶ್ಯಕವಿರುವ ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಗರ ಪಾಲಿಕೆ ವಿಫಲವಾಗಿದೆ ಎನ್ನುತ್ತಿದ್ದಾರೆ. ಸಾರ್ವಜನಿಕ ಶೌಚಾಲಯಕ್ಕೆ, ಕುಡಿಯಲು, ಗಿಡ – ಮರ ಗಳಿಗೆ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ಪಾರ್ಕ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ, ಸಂಬಂಧ ಪಟ್ಟ ನಗರ ಪಾಲಿಕೆ ನಿದ್ದೆಯಿಂದ ಎಚ್ಚೆತ್ತು, ನಗರದ ಎಲ್ಲ ಪಾರ್ಕ್ ಗಳ ಸ್ವಚ್ಛತೆ ಮತ್ತು ಭದ್ರತೆ ಒದಗಿಸಬೇಕೆಂದು ಕಾಳಜಿ ಫೌಂಡೇಶನ್ ಸದಸ್ಯರು ನಗರದ ಸಾರ್ವಜನಿಕರ ಪರವಾಗಿ ಆಗ್ರಹಿಸುತ್ತದೆ…
ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


