ರಾಯಚೂರು: ತಾಲ್ಲೂಕಿನ ರಬ್ಬನಕಲ್ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಈಶ್ವರಿ (32) ಅವರಿಗೆ ಹೆರಿಗೆ ಆಗಿತ್ತು. ಬಳಿಕ ಬುಧವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮೂರು ದಿನಗಳ ನಂತರ ಮನೆಯಲ್ಲಿ ರಕ್ತಸ್ರಾವ ಉಂಟಾಗಿದೆ ಎಂದು ಶುಕ್ರವಾರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.
ಮಟಮಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಹೆರಿಗೆ ಆಗಿದೆ. ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಹೋದೆವು. ಮನೆಗೆ ಹೋದಾಗ ರಕ್ತಸ್ರಾವ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಮತ್ತೆ ಮಟಮಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಇಲ್ಲದೆ ಸಮಸ್ಯೆ ಎದುರಾಯಿತು.
ತಕ್ಷಣ ಆಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ನಾವು ಏನೂ ಮಾಡೋಕೆ ಆಗಲ್ಲ ಎಂದು ಬರೆಸಿಕೊಂಡು ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಲ್ಲೇ ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ಸಂಬಂಧಿ ಚರಣರಾಜ್ ತಿಳಿಸಿದರು. ಮೃತ ಬಾಣಂತಿಗೆ ಮೂವರು ಮಕ್ಕಳಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx