ತುಮಕೂರು: ಬ್ಲ್ಯಾಕ್ ಮೇಲ್‌ಗೆ ಹೆದರಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿರಾ ತಾಲ್ಲೂಕು ಕಳ್ಳಂಬೆಳ್ಳದಲ್ಲಿ ನಡೆದಿದೆ.
ಕಳ್ಳಂಬೆಳ್ಳದಲ್ಲಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಯ ಸಾವಿಗೆ ಮುಳುವಾಗಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಹಂಸಲೇಖ ಅವರು ಮಲ್ಲಿಕಾರ್ಜುನ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆ ಮತ್ತು ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಹಂಸಲೇಖ ಭಯಗೊಂಡು ಮಗನೊಂದಿಗೆ ಮನೆ ತೊರೆದು ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಆರೋಪಿ ಹಂಸಲೇಖ ಭೂಪಸಂದ್ರ ಗ್ರಾಮದ ನಾಗೇಶ್ ಜೊತೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಕೆಲವು ವರ್ಷಗಳ ಹಿಂದೆ ಹಂಸಲೇಖ ಪತಿ ನಾಗೇಶ್ ಅನಾರೋಗ್ಯದ ನಿಮಿತ್ತ ಮೃತಪಟ್ಟಿದ್ದರು. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್ ಜೊತೆ ಹಂಸಲೇಖಗೆ ಮದುವೆ ಮಾಡಿಸಲಾಗಿತ್ತು. ಆದಾಗ್ಯೂ ಪರ ಪುರುಷನ ಸಹವಾಸ ಮಾಡಿದ್ದು, ಈಕೆಯ ಸಾವಿಗೆ ಮುಳುವಾಗಿದೆ. ಇದರ ಪರಿಣಾಮವಾಗಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಮನಿಸಿ: ಬ್ಲ್ಯಾಕ್ ಮೇಲ್ ಅಥವಾ ಮಾನಸಿಕ ಒತ್ತಡದಂತಹ ಸಂದರ್ಭಗಳಲ್ಲಿ ಯಾರಾದರೂ ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ದಯವಿಟ್ಟು ಸಹಾಯವಾಣಿಗಳನ್ನು (ಉದಾಹರಣೆಗೆ 104 ಅಥವಾ 080-46110007) ಸಂಪರ್ಕಿಸಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


