ಬೆಂಗಳೂರು: ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.
ಅನುಷಾ(23) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ, ಪಕ್ಕದ ಊರಿನ ಪ್ರವೀಣ್ ಎಂಬುವವರೊಂದಿಗೆ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಒಂದು ವರ್ಷದಿಂದ ಅನುಷಾ ಹಾಗೂ ಪ್ರವೀಣ್ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಈಕೆ ಪಾಲಕರ ವಿರೋಧದ ನಡುವೆಯೂ 2 ತಿಂಗಳ ಹಿಂದೆ ಮನೆ ಬಿಟ್ಟು ಬಂದು ಪ್ರವೀಣ್ ಜತೆ ಮದುವೆ ಆಗಿ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು. ಅನುಷಾ ಮನೆಯಲ್ಲೇ ಇದ್ದಳು. ಆದರೆ ಅತ್ತೆಯ ಅತಿಯಾದ ಕಿರುಕುಳದಿಂದಾಗಿ ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


