ಬೆಂಗಳೂರು: ನವವಿವಾಹಿತನೊಬ್ಬ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಲಹಂಕ ಮೂಲದ ನವೀನ್ ಮೃತ ದುರ್ದೈವಿಯಾಗಿದ್ದಾನೆ.
ಈತ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ನವೀನ್ ಸ್ಕೂಟರ್ ಅನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ವಿವರ ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತಿದೆ.
ನವೀನ್ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಬೆಳಗ್ಗೆ ಡ್ಯೂಟಿಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಟಿದ್ದ ನವೀನ್ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಕೆಳಗೆ ಜಿಗಿದಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296