ತುಮಕೂರು: ತಾಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸುಮಾರು ನೂರಕ್ಕೂ ಹೆಚ್ಚು ಜನರು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ.
ಜೋದನಿ ಪೇಪರ್ ಪೈ. ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಆಕಸ್ಮಿಕ ಘಟನೆ ನಡೆದಿದೆ. ಘಟನೆ ವೇಳೆ ಎಂದಿನಂತೆ ಸುಮಾರು 150 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಹತ್ತಿಕೊಂಡ ಬೆಂಕಿ ಕಾರ್ಖಾನೆಯನ್ನು ಆವರಿಸಿದೆ.
ಕಾರ್ಖಾನೆ ಒಳಗಿದ್ದ ನೂರಕ್ಕೂ ಹೆಚ್ಚು ಕಾರ್ಮಿಕರನ್ನ ಸಮಯ ಪ್ರಜ್ಞೆಯಿಂದ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಪೇಪರ್ ಬಂಡಲ್ ಹಾಗೂ ಮಿಷಿನ್ ಸುಟ್ಟುಕರಕಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


