ಬೆಂಗಳೂರು: ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ ಪೊಲೀಸರ ಎದುರೇ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ವ್ಯಕ್ತಿಯೊಬ್ಬರು ಕಾವೇರಿ ನಿವಾಸದ ಬಳಿ ಸಿಎಂಗೆ ಮನವಿ ನೀಡಲು ಬಂದಿದ್ದರು. ಈ ವೇಳೆ ಪೊಲೀಸರು ಅವರಿಗೆ ಅವಕಾಶ ನೀಡದ ಹಿನ್ನೆಲೆ ವ್ಯಕ್ತಿ ಕೋಪಗೊಂಡಿದ್ದು, ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಿದ್ದಾನೆ.
ವ್ಯಕ್ತಿಯ ಹೇಳಿಕೆಗೆ ಪೊಲೀಸರೇ ತಬ್ಬಿಬ್ಬಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಬಂದ ವ್ಯಕ್ತಿಯನ್ನು ಪೊಲೀಸರು ತಡೆದಿದ್ದಕ್ಕೆ ಗರಂ ಆಗಿದ್ದು, ಸುಮ್ಮನೆ ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಆದರೆ ಆತನ ಬ್ಯಾಗ್ ನಲ್ಲಿ ಯಾವುದೇ ಅಂತಹ ವಸ್ತುಗಳು ಇರಲಿಲ್ಲ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q