ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಹೋಟೆಲ್’ಗೆ ಬಂದು.
ಖುಷಿ ಖುಷಿಯಲ್ಲಿ ಮಾತನಾಡುತ್ತ ಇನ್ನೇನು ಊಟ ಮಾಡಬೇಕು ಅಂತ ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿ ಪ್ರಾಣವನ್ನೇ ಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ತುಣುಕೊಂದು ಇದೀಗ ವೈರಲ್ ಆಗುತ್ತಿದೆ. ರೆಸ್ಟೋರೆಂಟ್ ಒಂದಕ್ಕೆ ಕುಟುಂಬ ಸಮೇತ ಊಟಕ್ಕೆ ಬಂದಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಈ ದೃಶ್ಯ ಅಲ್ಲಿದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವೈರಲ್ ವಿಡಿಯೋದಲ್ಲಿ ಕುಟುಂಬ ಸಮೇತ ರೆಸ್ಟೋರೆಂಟ್ ಗೆ ಬಂದಂತಹ ವ್ಯಕ್ತಿಯೊಬ್ಬರು ಅವರೆಲ್ಲರೊಂದಿಗೆ ಖುಷಿಯಿಂದ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಮಾತನಾಡುತ್ತಿರುವಾಗ ಅವರು ಆರ್ಡರ್ ಮಾಡಿದಂತಹ ಫುಡ್ ಬರುತ್ತದೆ. ಇನ್ನೇನೂ ತುತ್ತು ಅನ್ನವನ್ನು ಬಾಯಲ್ಲಿಡಬೇಕು ಅನ್ನುವಷ್ಟರಲ್ಲಿ ಆ ಮಧ್ಯವಯಸ್ಸಿನ ವ್ಯಕ್ತಿ ಹೃದಯಾಘಾತಕ್ಕೆ ತುತ್ತಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA