ತುಮಕೂರು: ಸರಗಳ್ಳನನ್ನು ಹಿಡಿಯಲು ಚೇಸ್ ಮಾಡುತ್ತಿದ್ದ ವೇಳೆ ಪೊಲೀಸರ ಕಾರು ಅಪಘಾತವಾಗಿದ್ದು, ಮೂವರು ಮಧುಗಿರಿ ಠಾಣೆ ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ಆಂಧ್ರಪ್ರದೇಶದ ಮಣೂರು ಬಳಿ ನಡೆದಿದೆ.
ಮಧುಗಿರಿ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಪ್ರಕಾಶ್, ಮುದ್ದರಾಜು ಹಾಗೂ ರಮೇಶ್ ಗೆ ಗಂಭೀರ ಗಾಯವಾಗಿದೆ. ನಿನ್ನೆ ಮಧುಗಿರಿ ಪಟ್ಟಣದಲ್ಲಿ ಮಹಿಳೆ ಬಳಿ 70 ಗ್ರಾಂ ಚಿನ್ನದ ಸರ ಕದ್ದು ಎಸ್ಕೇಪ್ ಆಗ್ತಿದ್ದ ಖದೀಮನನ್ನು ಬಂಧಿಸಲು ತೆರಳುತ್ತಿದ್ದರು.
ಈ ಪ್ರಕರಣ ಸಂಬಂಧ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ಕಳ್ಳನ ಜಾಡು ಹಿಡಿದು ಹೊರಟಿದ್ದ ಮಧುಗಿರಿ ಪೊಲೀಸರು ಸರಗಳ್ಳನನ್ನ ಹಿಡಿಯುವ ಭರದಲ್ಲಿ ವೇಗವಾಗಿ ತೆರಳುತ್ತಿದ್ದರು. ಈ ವೇಳೆ ಕಾರಿನ ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದಿದೆ. ಈ ಘಟನೆಯಿಂದಾಗಿ ಮೂವರಿಗೂ ಕಣ್ಣು, ತಲೆ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಆಂಧ್ರದ ಧರ್ಮವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪೊಲೀಸ್ ಸಿಬ್ಬಂದಿಗಳು ಪಾರಾಗಿದ್ದಾರೆ. ಆಂಧ್ರಪ್ರದೇಶದ ಧರ್ಮವರಂ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q