ಭೂಪಾಲ್: ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಫಿಯಾಗೆ ಪೊಲೀಸ್‌ಪೇದೆಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಮರಳು ಮಾಫಿಯಾಗೆ ಬಲಿಯಾಗಿರುವ ವ್ಯಕ್ತಿಯನ್ನು ಶೆಹ್ಡೋಲ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಮಹೇಂದ್ರ ಬಗ್ರಿ ಎಂದು ಗುರುತಿಸಲಾಗಿದೆ.
ಬಗ್ರಿ ಅವರು ಇಬ್ಬರು ಕಾನ್ ಸ್ಟೆಬಲ್ ಗಳಾದ ಪ್ರಸಾದ್ ಕಾನೋಜಿ ಮತ್ತು ಸಂಜಯ್ ದುಬೆ ಅವರೊಂದಿಗೆ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಸ್ಥಳಕ್ಕೆ ಹೋಗಿದ್ದರು. ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವೇಗವಾಗಿ ಬಂದ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಬಗ್ರಿ ಮೇಲೆ ಹರಿಸಲಾಯಿತು ಹೀಗಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರ ಜತೆಯಲ್ಲಿದ್ದ ಕಾನೋಜಿ ಮತ್ತು ದುಬೆ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕ ಮತ್ತು ಟ್ರಕ್ ಮಾಲೀಕನ ಮಗನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಟ್ರ್ಯಾಕ್ಟರ್ ಮಾಲೀಕರು ಪರಾರಿಯಾಗಿದ್ದಾರೆ. ಟ್ರಾಕ್ಟರ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296