ರಾಮನಗರ: ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗೌರಮ್ಮ(55) ಕೊಲೆಯಾದ ದುರ್ದೈವಿ.
ಜಮೀನು ಒತ್ತುವರಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಕೃತ್ಯ ಆರೋಪವು ಗೌರಮ್ಮನ ದೂರದ ಸಂಬಂಧಿಯಿಂದಲೇ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಾಗಿ ಪೊಲೀಸರಿಂದ ಹುಡುಕಾಟ ಆರಂಭಿಸಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


